ಸಿಬಿಐ ವಿಚಾರಣೆಗೆ ರಾಜೀವ್ ಕುಮಾರ್ ಹಾಜರಾಗಬೇಕು: ಸುಪ್ರೀಂಕೋರ್ಟ್…

223
firstsuddi

ನವದೆಹಲಿ: ಸಿಬಿಐ ಅಧಿಕಾರಿಗಳನ್ನು ಪಶ್ಚಿಮ ಬಂಗಾಳ ಪೊಲೀಸರು ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ  ಸಿಜೆಐ ರಂಜನ್ ಗೊಗೊಯಿ ನೇತೃತ್ವದ ತ್ರಿಸದಸ್ಯ ಪೀಠ ರಾಜೀವ್ ಕುಮಾರ್ ಅವರನ್ನು ಸಿಬಿಐ ವಿಚಾರಣೆಗೆ ಹಾಜರಾಗಬೇಕು ಆದರೆ ಅವರನ್ನು ಬಂಧಿಸುವಂತಿಲ್ಲ ಎಂದು ಸೂಚನೆ ನೀಡಿದೆ. ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಫೆ.20ಕ್ಕೆ ಮುಂದೂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ತೀವ್ರ ಹಿನ್ನಡೆಯಾಗಿದೆ.