ಕಿರುತೆರೆ ನಟಿ ಆತ್ಮಹತ್ಯೆಗೆ ಶರಣು…

572
firstsuddi

ಹೈದರಾಬಾದ್: ಕಿರುತೆರೆ ನಟಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರ ಪ್ರದೇಶದ ಹೈದರಾಬಾದ್‍ನ ಶ್ರಿನಗರ ಕಾಲೋನಿಯಲ್ಲಿರುವ ಶ್ರೀ ಸಾಯಿ ಅಪಾರ್ಟ್‍ಮೆಂಟ್‍ನಲ್ಲಿ ನಡೆದಿದೆ. ಜಾನ್ಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಕಿರುತೆರೆ ನಟಿ. ಪವಿತ್ರ ಬಂಧನ ಎಂಬ ಧಾರಾವಾಹಿಯಲ್ಲಿ ನಟಿಸಿದ್ದು, ಸೂರ್ಯ ಎಂಬುವವರನ್ನು ಪ್ರೀತಿಸುತ್ತಿದ್ದರು ಎನ್ನಲಾಗಿದ್ದು, ಆದರೆ ಇವರ ಮದುವೆಗೆ ಪೋಷಕರ ವಿರೋಧವಿತ್ತು ಎನ್ನಲಾಗಿದೆ. ಇದೇ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.