ರಸ್ತೆ ದಾಟುತ್ತಿದ್ದ ಬಾಲಕಿಗೆ ಬೈಕ್ ಡಿಕ್ಕಿ, ಅದೃಷ್ಟವಶಾತ್ ಬಾಲಕಿ ಅಪಾಯದಿಂದ ಪಾರು…

212
firstsuddi

ಹಾಸನ: ರಸ್ತೆ ದಾಟುತ್ತಿದ್ದ ಬಾಲಕಿಗೆ ಬೈಕ್ ಡಿಕ್ಕಿಯಾಗಿ ಬಾಲಕಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಹೊರವಲಯದ ಬಿಟ್ಟಗೌಡನಹಳ್ಳಿ ಬಳಿ ನಡೆದಿದೆ.ಗಾನವಿ(7) ಗಾಯಗೊಂಡ ಬಾಲಕಿ. ಗಾನವಿ ತಾಯಿ ಜೊತೆಗೆ ಟ್ಯೂಷನ್‍ಗೆ ತೆರಳುತ್ತಿದ್ದ ಸಂದಭದಲ್ಲಿ ಅರಕಲಗೂಡು, ಹಾಸನ ರಾಜ್ಯ ಹೆದ್ದಾರಿ ರಸ್ತೆ ದಾಟುವಾಗ ಗಾನವಿ ತಾಯಿಯ ಕೈ ಕೈಬಿಟ್ಟು ಓಡಿಹೋಗಿದ್ದು, ಈ ವೇಳೆ ವೇಗವಾಗಿ ಬಂದ ಬೈಕ್ ಬಾಲಕಿಗೆ ಡಿಕ್ಕಿ ಹೊಡೆದಿದೆ. ತಕ್ಷಣ ಬಾಲಕಿಯನ್ನು ಸ್ಥಳೀಯ ಸಗಿ ಆಸ್ಪತ್ರೆ ಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಅದೃಷ್ಟವಶಾತ್ ಬಾಲಕಿ ಅಪಾಯದಿಂದ ಪಾರಾಗಿದ್ದು,  ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಾಸನ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.