ಬೆಂಗಳೂರು: ಸಮ್ಮಿಶ್ರ ಸರ್ಕಾರದ ಬಜೆಟ್ ಮಂಡನೆಗೂ ಮೊದಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಆಪರೇಷನ್ ಕಮಲ ಕುರಿತ 40 ನಿಮಿಷದ ಆಡಿಯೋ ಬಾಂಬ್ ಸಿಡಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಗುರುಮಿಠ್ಕಲ್ ಕ್ಷೇತ್ರದ ಶಾಸಕ ನಾಗನಗೌಡಗೆ ಬಿಜೆಪಿ ಆಮೀಷವೊಡ್ಡಿದೆ ಎಂದು ಆರೋಪ ಮಾಡಿದ್ದು, ನಾಗನಗೌಡ ಪುತ್ರ ಶರಣಗೌಡ ನಾಯಕ ಜೊತೆ ಬಿ.ಎಸ್ ಯಡಿಯೂರಪ್ಪ ಅವರು ಮಾತನಾಡಿದ್ದಾರೆ ಎನ್ನಲಾಗಿರುವ ಆಡಿಯೋವನ್ನು ಬಿಡುಗಡೆ ಮಾಡಿದ್ದಾರೆ.










