ನವದೆಹಲಿ: ರಾಜ್ಯ ಆಪರೇಷನ್ ಕಮಲದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಮತ್ತು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಅವರು ಲೋಕಸಭಾ ಕಲಾಪದಲ್ಲಿ ಪ್ರಸ್ತಾಪಿಸಿದರು. ಸಮ್ಮಿಶ್ರ ಸರ್ಕಾರದ ಶಾಸಕರಿಗೆ ಆಮಿಷ ವೊಡ್ಡುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಮಲ್ಲಿಕಾರ್ಜುನ್ ಖರ್ಗೆ ಅವರು ಆರೋಪಿಸಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಮಾತನಾಡಿ ಮೊದಲ ಬಾರಿಗೆ 2009 ರಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ ಆಪರೇಷನ್ ಕಮಲ ಆರಂಭಿಸಲಾಯಿತು. ಯಾವ ರಾಜ್ಯದಲ್ಲಿಯೂ ಇಂತಹ ಆಪರೇಷನ್ಗಳು ಮಾಡುವುದು ಬೇಡ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ತಿಳಿಸಿದ್ದಾರೆ.










