ನವದೆಹಲಿ: ಅಜಾತ ಶತ್ರು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರವನ್ನು ರಾಷ್ಟ್ರ ಪತಿ ರಾಮನಾಥ್ ಕೊವಿಂದ್ ಅವರು ಇಂದು ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ಅನಾವರಣಗೊಳಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಅಟಲ್ ಜೀ ಅವರು ಸುದೀರ್ಘ ರಾಜಕೀಯ ಜೀವನ ಕಂಡವರು. ರಾಜಕೀಯ ಜೀವನದ ಬಹುತೇಕ ಭಾಗವನ್ನು ವಿಪಕ್ಷ ನಾಯಕನಾಗಿಯೇ ಸೇವೆ ಸಲ್ಲಿಸಿದ್ದಾರೆ. ಅವರ ಸಿದ್ಧಾಂತಗಳು ಮಾರ್ಗದರ್ಶನವಾಗಿದೆ ಎಂದು ತಿಳಿಸಿದರು.










