ಡೆತ್ ನೋಟ್ ಬರೆದಿಟ್ಟು ಯುವತಿ ನೇಣಿಗೆ ಶರಣು…

262
firstsuddi

ಮೈಸೂರು: ಪ್ರಿಯಕರ ಮೋಸ ಮಾಡಿದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹುಣಸೂರು ತಾಲೂಕು ಕಟ್ಟೆಮಳಲವಾಡಿ ಗ್ರಾಮದಲ್ಲಿ ನಡೆದಿದೆ.ಅರ್ಪಿತಾ (18) ಆತ್ಮಹತ್ಯೆ ಮಾಡಿಕೊಂಡ ಯುವತಿ. ಪ್ರಿಯಕರ ಮದುವೆಯಾಗುವುದಾಗಿ ನಂಬಿಸಿ ಕೈಕೊಟ್ಟ ಹಿನ್ನೆಲೆ ಮನನೊಂದು ಅರ್ಪಿತಾ  ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.