ಅಭಿಮಾನಿಗಳಿಗೆ ಪತ್ರ ಬರೆದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್…

505
firstsuddi

ಬೆಂಗಳೂರು : ಫೆಬ್ರವರಿ 16 ರಂದು ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರ  ಹುಟ್ಟುಹಬ್ಬ. ಆದರೆ ಅಂಬರೀಷ್‌ ಅವರು ನಮ್ಮನ್ನು ಅಗಲಿ ದೂರವಾದ ಕಾರಣ ನನ್ನ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸುವ ಕುರಿತು ಅಭಿಮಾನಿಗಳಿಗೆ ಪತ್ರದ ಮೂಲಕ ಮನವಿ ದರ್ಶನ್ ಅವರು  ಮಾಡಿಕೊಂಡಿದ್ದರು. ಬ್ಯಾನರ್, ಕೇಕ್ ಹಾಗೂ ಹಾರಗಳನ್ನು ದಯಮಾಡಿ ಯಾರು ತರಬೇಡಿ. ಅದೇ  ಹಣವನ್ನು ನಿಮ್ಮ ಊರಿನಲ್ಲಿರುವ “ಅನಾಥ ಮಕ್ಕಳ ವಿದ್ಯಾಭ್ಯಾಸಕ್ಕೆ” ಮೀಸಲಾಗಿಡಿ ಎಂದು ಈ ಹಿಂದೆ ಅಭಿಮಾನಿಗಳಿಗೆ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದರು.
ಇದೀಗ ಮತ್ತೊಮ್ಮೆ ದರ್ಶನ್ ಅವರು ಅಭಿಮಾನಿಗಳಿಗೆ ಪತ್ರವನ್ನು ಬರೆದಿದ್ದಾರೆ. ಇತ್ತೀಚೆಗೆ ಕೆಲವು ಅಭಿಮಾನಿಗಳು ನನ್ನ ಹುಟ್ಟು ಹಬ್ಬದ ಪ್ರಯುಕ್ತ ನನ್ನ ಮನೆಯ ಹತ್ತಿರ ಆಹಾರ ಪದಾರ್ಥಗಳನ್ನು ತಂದು ನೀಡುತ್ತೇವೆ, ಅದನ್ನು ಸಿದ್ದಗಂಗಾ ಮಠ ಹಾಗೂ ಕೆಲವು ಅನಾಥಾಶ್ರಮಕ್ಕೆ ತಲುಪಿಸಿ ಎಂದು ಕೇಳಿಕೊಂಡು ಫೇಸ್ ಬುಕ್ ನಲ್ಲಿ ವಿಡಿಯೋ ಮಾಡಿ ಬಿಟ್ಟಿರುವುದು ತುಂಬಾ ಸಂತೋಷದ ವಿಷಯ, ನನ್ನ ಹುಟ್ಟು ಹಬ್ಬಕ್ಕೆ ನೀವುಗಳು ಕೊಡುತ್ತಿರುವ ಉಡುಗೊರೆ ಎಂದು ತಿಳಿದು ಅದನ್ನು ಪ್ರತಿ ಜಿಲ್ಲೆಯ ಒಂದು ಅನಾಥಾಶ್ರಮಕ್ಕೆ, ಒಂದು ವೃದ್ಧಾಶ್ರಮಕ್ಕೆ ಹಾಗೂ ಸಿದ್ದಗಂಗಾ ಮಠಕ್ಕೆ ತಲುಪಿಸುವ ಜವಾಬ್ದಾರಿಯನ್ನು ತುಂಬಾ ಸಂತೋಷದಿಂದ ನಾನೇ ತೆಗೆದು ಕೊಳ್ಳುತ್ತೇನೆ. ಆದಷ್ಟು ಬಟ್ಟೆ ಬ್ಯಾಗ್ ಗಳನ್ನೇ ಬಳಸಿ. ಇಂತಿ ನಿಮ್ಮ ಪ್ರೀತಿಯ ದಾಸ ದರ್ಶನ್‌ ಎಂದು ದರ್ಶನ್ ಅವರು ತಮ್ಮ ಅಭಿಮಾನಿಗಳಿಗೆ ತಿಳಿಸಿದ್ದಾರೆ.