ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ದೂರು…

217
firstsuddi

ಬೆಂಗಳೂರು: ಹಾಸನದ ಶಾಸಕ ಪ್ರೀತಂಗೌಡ ಅವರ ಮನೆ ಮೇಲೆ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ನಿಯೋಗವು ವಿಧಾನಸೌಧದಿಂದ ರಾಜಭವನದವರೆಗೆ ಪಾದಯಾತ್ರೆ ನಡೆಸಿತು. ಬಳಿಕ ರಾಜ್ಯಪಾಲರಾದ ವಜುಭಾಯ್ ವಾಲಾ ಅವರನ್ನು ಬಿಜೆಪಿ ನಿಯೋಗ ಭೇಟಿ ಮಾಡಿ ಹಾಸನದಲ್ಲಿ ಬಿಜೆಪಿ ಶಾಸಕ ಪ್ರೀತಂಗೌಡ ಮನೆ ಮೇಲೆ ಕಲ್ಲು ತೂರಾಟ  ವಿಚಾರಕ್ಕೆ ಸಂಬಂಧಿಸಿದಂತೆ  ರಾಜ್ಯಪಾಲರಿಗೆ  ದೂರು ನೀಡಿತು.