ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ನಾಗೇಶ್ ಅವರು ಮತ್ತೆ ಬೆಂಬಲ ನೀಡಿದ್ದಾರೆ. ಸಮನ್ವಯ ಸಮಿತಿ ಅಧ್ಯಕ್ಷರಾದ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಶಾಸಕ ನಾಗೇಶ್ ಅವರು ಬೆಂಬಲ ಪತ್ರವನ್ನು ನೀಡಿದ್ದಾರೆ. ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಉಪಸ್ಥಿತರಿದ್ದರು.










