ಸುಷ್ಮಾ ಸ್ವರಾಜ್ ಅವರಿಗೆ ಜನ್ಮದಿನದ ಶುಭಾಶಯಗಳು:ಬಿ.ಎಸ್ ಯಡಿಯೂರಪ್ಪ …

409
firstsuddi

ಬೆಂಗಳೂರು: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಇಂದು ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಟ್ವಿಟ್ ಮೂಲಕ ಶುಭಾಶಯ ತಿಳಿಸಿದೆ. ಅತ್ಯುತ್ತಮ ವಾಕ್ಪಟು, ಮಹಾನ್ ರಾಷ್ಟ್ರಾಭಿಮಾನಿ, ದೇಶ ಕಂಡ ಶ್ರೇಷ್ಠ ರಾಜಕಾರಣಿ, ಜನಪರ ನಾಯಕಿ, ನಿಷ್ಕಳಂಕ ವ್ಯಕ್ತಿತ್ವ, ನೇರ ನಡೆ-ನುಡಿ ಹೊಂದಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಜನ್ಮದಿನದ ಶುಭಾಶಯಗಳು. ಇವರ ನೇತೃತ್ವದಲ್ಲಿ ದೇಶ ಇನ್ನಷ್ಟು ಪ್ರಗತಿ ಸಾಧಿಸಲಿ ಎಂದು ಟ್ವಿಟ್ ಮಾಡಿದ್ದಾರೆ.