ಬೆಂಗಳೂರು: ಜಮ್ಮುವಿನ ಪುಲ್ವಾಮದಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಕೆಪಿಸಿಸಿ ಕಚೇರಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದು, ಮೇಣದ ದೀಪ ಬೆಳಗುವ ಮೂಲಕ ಹುತಾತ್ಮ ವೀರ ಯೋಧರಿಗೆ ಗೌರವ ಸಲ್ಲಿಸಲಾಯಿತು . ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಹಿರಿಯ ನಾಯಕರು ಇದ್ದರು.










