ಹುಟ್ಟೂರಿನತ್ತ ಹುತಾತ್ಮ ಗುರು ಪಾರ್ಥಿವ ಶರೀರ…

267
firstsuddi

ಬೆಂಗಳೂರು: ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರ ದಾಳಿಗೆ ಹುತಾತ್ಮರಾದ ರಾಜ್ಯದ ವೀರ ಯೋಧ ಗುರು ಅವರ ಪಾರ್ಥಿವ ಶರೀರ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ತಲುಪಿದ್ದು, ಹೆಚ್.ಎ.ಎಲ್. ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಕೇಂದ್ರ ಸಚಿವ ಸದಾನಂದ ಗೌಡ, ಸಂಸದೆ ಶೋಭಾ ಕರಂದ್ಲಾಜೆ,   ಗೃಹ ಸಚಿವ ಎಂ ಬಿ ಪಾಟೀಲ್,ವಾಯುಸೇನೆ ಹಿರಿಯ ಅಧಿಕಾರಿಗಳು ಸೇರಿದಂತೆ ಹಲವಾರು ಗಣ್ಯರು ಹುತಾತ್ಮ ಯೋಧನಿಗೆ ಪುಷ್ಪನಮನ ಗೌರವ ನಮನ ಸಲ್ಲಿಸಿದರು. ಬಳಿಕ ಸೇನಾ ವಾಹನದ ಮೂಲಕ ಹುಟ್ಟೂರಿನತ್ತ ಗುರು ಅವರ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗುತ್ತಿದೆ.