ತಾಯಿಯ ಚಿತೆಗೆ ಬೆಂಕಿ ಇಟ್ಟು ಬಳಿಕ ಕೊನೆಯುಸಿರೆಳೆದ ಮಗ…

412

ಉತ್ತರ ಕನ್ನಡ: ಮೃತಪಟ್ಟ ತಾಯಿಯ ಚಿತೆಗೆ ಬೆಂಕಿ ಇಟ್ಟು ನಂತರ ಮಗ ಹೃದಯಾಘಾತವಾಗಿದಿಂದ  ಮೃತಪಟ್ಟಿರುವ ಘಟನೆ ಜಿಲ್ಲೆಯ ಕಾರವಾರ ತಾಲೂಕಿನ ಸಿದ್ಧರದಲ್ಲಿ ನಡೆದಿದೆ. ಮಂಜುನಾಥ ಆತ್ಮಾರಾಮ ಕೊಳಂಬಕರ್ (49) ಮೃತಪಟ್ಟ ವ್ಯಕ್ತಿ. ಅನಾರೋಗ್ಯದಿಂದ ಬಳಲುತ್ತಿದ್ದ ಮಂಜುನಾಥ್ ಅವರ ತಾಯಿ ಸಾವಿತ್ರಿ ಕೊಳಂಬಕರ್ ಅವರು ಮೃತಪಟ್ಟಿದ್ದು, ಮಂಜುನಾಥ್ ಅವರು ತಾಯಿಯ ಅಂತ್ಯ ಸಂಸ್ಕಾರವನ್ನು ಧಾರ್ಮಿಕ ವಿಧಿವಿಧಾನಗಳನ್ನು ಪೂರೈಸಿ ಚಿತೆಗೆ ಬೆಂಕಿ ಇಡುತ್ತಿದ್ದಂತೆಯೇ ಮಂಜುನಾಥ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಸಿದ್ಧರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಕಾರವಾರದ ಜಿಲ್ಲಾಸ್ಪತ್ರೆಗೆ ಕರೆ ತರುವಷ್ಟರಲ್ಲಿ ಮಂಜುನಾಥ್ ಅವರು ಕೊನೆಯುಸಿರೆಳೆದಿದ್ದಾರೆ.ಕಾರವಾರ ಗ್ರಾಮೀಣ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.