ಬೆಂಗಳೂರು: ಈಗಲ್ ಟನ್ ರೆಸಾರ್ಟ್ ನಲ್ಲಿ ಶಾಸಕ ಆನಂದ ಸಿಂಗ್ ಅವರ ಮೇಲೆ ಹಲ್ಲೆ ನಡೆಸಿ ಬಳಿಕ ತಲೆಮರೆಸಿಕೊಂಡಿದ್ದ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಅವರನ್ನು ಬಿಡದಿ ಪೊಲೀಸರು ನಿನ್ನೆ ಗುಜರಾತ್ ನಲ್ಲಿ ಬಂಧಿಸಿದ್ದರು. ಗಣೇಶ್ ಅವರನ್ನು ಇಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಬಿಡದಿ ಠಾಣೆಗೆ ಪೊಲೀಸರು ಕರೆತಂದಿದ್ದಾರೆ. ಬಿಡದಿ ಠಾಣೆಯ ಬಳಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.










