ಬೆಂಗಳೂರು : ಆಪರೇಷನ್ ಕಮಲದ ಆಡಿಯೋ ವಿಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಎಫ್ ಐ ಆರ್ ಗೆ ಕಲಬುರಗಿ ಹೈಕೋರ್ಟ್ ಮಧ್ಯಂತರ ತಡೆ ನೀಡಲಾಗಿದೆ. ಆಪರೇಷನ್ ಕಮಲ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾದ ಎಫ್ ಐಆರ್ ಅನ್ನು ರದ್ದುಗೊಳಿಸಬೇಕೆಂದು ಕೋರಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸೇರಿದಂತೆ ನಾಲ್ವರು ಕಲಬುರಗಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣಕ್ಕೆಸಂಬಂಧಿಸಿದಂತೆ ವಿಚಾರಣೆ ನಡೆಸಿದ ಕಲಬುರಗಿ ಹೈಕೋರ್ಟ್ ಮಧ್ಯಂತರ ತಡೆ ಆದೇಶ ಹೊರಡಿಸಿದರು. ಬಿಎಸ್ ಯಡಿಯೂರಪ್ಪ,ದೇವದುರ್ಗದ ಶಾಸಕರಾದ ಶಿವನಗೌಡ ನಾಯಕ್, ಪ್ರೀತಂ ಗೌಡ ಸೇರಿದಂತೆ ನಾಲ್ವರ ವಿರುದ್ಧ ಆಪರೇಷನ್ ಕಮಲ ಆಡಿಯೋ ಪ್ರಕರಣದಲ್ಲಿ ರಾಯಚೂರು ಜಿಲ್ಲೆಯ ದೇವದುರ್ಗ ಪೊಲೀಸರು ಎಫ್ ಐಆರ್ ದಾಖಲಾಗಿತ್ತು .










