ಬೆಂಗಳೂರು: ಗೃಹ ಸಚಿವ ಎಂ.ಬಿ ಪಾಟೀಲ್ ಅವರು ಟ್ವಿಟ್ ಮೂಲಕ ಸಮಾಜದಲ್ಲಿ, ಅದರಲ್ಲಿಯೂ ವಿಶೇಷವಾಗಿ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಹಾಗೂ ಹಿಂಸೆಯನ್ನು ಪ್ರಚೋದಿಸಲು ಪ್ರಯತ್ನಿಸುವವರು ಮತ್ತು ಕೋಮು ಸೌಹಾರ್ದತೆಯನ್ನು ಕದಡುವವರ ವಿರುದ್ಧ ಕಠಿಣವಾದ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಇಂತಹ ಕೆಲಸಗಳಲ್ಲಿ ತೊಡಗಿರುವವರನ್ನು ಪೊಲೀಸ್ ಇಲಾಖೆಯು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಎಂ.ಬಿ ಪಾಟೀಲ್ ಅವರು ಟ್ವಿಟ್ ಮಾಡಿದ್ದಾರೆ.











