ಏರೋ ಇಂಡಿಯಾ ಶೋ ವೇಳೆ ಅಗ್ನಿ ಅವಘಡ; ಆತಂಕಪಡುವ ಅಗತ್ಯವಿಲ್ಲ: ಸಿಎಂ ಕುಮಾರಸ್ವಾಮಿ…

266
firstsuddi

ಬೆಂಗಳೂರು : ಯಲಹಂಕದ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೋ ಇಂಡಿಯಾ ಶೋ ಪ್ರದರ್ಶನದ ವೇಳೆ ಅಗ್ನಿ ಅವಘಡ ಸಂಭವಿಸಿದ್ದು, ಅವಘಡದಲ್ಲಿ 250ಕ್ಕೂ ಹೆಚ್ಚು ಕಾರುಗಳು ಪಾರ್ಕಿಂಗ್ ಸ್ಥಳದಲ್ಲಿ ಅಗ್ನಿಗಾಹುತಿಯಾಗಿದೆ. ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಟ್ವಿಟ್ ಮಾಡಿದ್ದು , ಏರೋ ಇಂಡಿಯಾ ಶೋ ವೇಳೆ ಅಗ್ನಿ ಅವಘಡ ಸಂಬಂಧ ಆತಂಕಪಡುವ ಅಗತ್ಯವಿಲ್ಲ. ಯಾವುದೇ ಜೀವಹಾನಿಯಾಗಿಲ್ಲ. ವಾಹನಗಳು ಬೆಂಕಿಯಲ್ಲಿ ಸುಟ್ಟುಹೋಗಿರುವ ಬಗ್ಗೆ ವರದಿಯಾಗಿದ್ದು ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ಹಾಗೂ ಅಗ್ನಿಶಾಮಕ ವರಿಷ್ಠರಿಗೆ ಸೂಚನೆ ನೀಡಿದ್ದೇನೆ ಎಂದು ಟ್ವಿಟ್ ಮಾಡಿದ್ದಾರೆ.