ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತದಿಂದ ಏರ್ ಸ್ಟ್ರೈಕ್…

126
firstsuddi

ನವದೆಹಲಿ: ಪುಲ್ವಾಮಾ ಉಗ್ರ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ಕಳೆದ ರಾತ್ರಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಏರ್ ಸ್ಟ್ರೈಕ್ ಮಾಡಿದೆ ಎನ್ನಲಾಗುತ್ತಿದೆ. ಇಂದು ಬೆಳಗಿನ ಜಾವ 3.30ರ ಸುಮಾರಿಗೆ ಒಟ್ಟು 12 ಮಿರಾಜ್‌ ಯುದ್ಧ ವಿಮಾನಗಳು ಪಾಕಿಸ್ತಾನಕ್ಕೆ ನುಗ್ಗಿ ಏರ್ ಸ್ಟ್ರೈಕ್ ನಡೆಸುವ ಮೂಲಕ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಲಾಂಚಿಂಗ್‌ ಪ್ಯಾಡ್‌ಗಳು ಛಿದ್ರ ಛಿದ್ರಗೊಳಿಸಿದೆ ಎನ್ನಲಾಗುತ್ತಿದ್ದು, ಭಾರತೀಯ ವಾಯುಸೇನೆಯು ಭಯೋತ್ಪಾದಕ ನೆಲೆಯ ಮೇಲೆ 1000 ಕೆಜಿ ಬಾಂಬ್ ಅನ್ನು ಎಸೆದಿರುವುದಾಗಿ ತಿಳಿದು ಬಂದಿದ್ದು, ದಾಳಿಯಲ್ಲಿ 300ಕ್ಕೂ ಹೆಚ್ಚು ಉಗ್ರರು ಬಲಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.