ಕಾಂಗ್ರೆಸ್-ಜೆಡಿಎಸ್ ಜಂಟಿಯಾಗಿ ಸ್ಪರ್ಧೆ ಮಾಡುವುದರಿಂದ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸವಿದೆ:ಸಿದ್ದರಾಮಯ್ಯ…

175
firstsuddi

ಬೆಂಗಳೂರು:ರಾಜ್ಯದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿಯ ಸಭೆ ಇಂದು ಕುಮಾರ ಕೃಪಾ ಅತಿಥಿ ಗೃಹದಲ್ಲಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು,ಇದಕ್ಕೆ ಸಂಬಂದಿಸಿದಂತೆ ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ ಅವರು ಟ್ವಿಟ್ ಮೂಲಕ ಕಾಂಗ್ರೆಸ್ – ಜೆಡಿಎಸ್ ಜಂಟಿಯಾಗಿ ಸ್ಪರ್ಧೆ ಮಾಡುವುದರಿಂದ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸವಿದೆ. ಸೀಟು ಹಂಚಿಕೆ ಬಗ್ಗೆ ಈಗಾಗಲೇ ಜೆಡಿಎಸ್ ಮುಖಂಡರು ಹಾಗೂ ನಮ್ಮವರು ಚರ್ಚೆ ಮಾಡಿದ್ದು, ಇಂದು ಕ್ಷೇತ್ರಗಳ ಪಟ್ಟಿಯನ್ನು ನೀಡಿದ್ದಾರೆ. ಇದರ ಬಗ್ಗೆಯೂ ಇಂದಿನ‌ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ.

ಯಾವ ಪಕ್ಷ ಎಷ್ಟು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂಬ ಬಗ್ಗೆ ವಿಸ್ತೃತ ಚರ್ಚೆ ನಡೆದಿದೆ. ಚರ್ಚೆಯಲ್ಲಿ ಸಕಾರಾತ್ಮಕ ಸ್ಪಂದನೆ ವ್ಯಕ್ತವಾಗಿದ್ದು, ಮಾರ್ಚ್ 10 ರೊಳಗೆ ಅಂತಿಮ ನಿರ್ಧಾರಕ್ಕೆ ಬರಲಾಗುವುದು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೋಮುವಾದಿ ಶಕ್ತಿಯನ್ನು ಅಧಿಕಾರದಿಂದ ದೂರವಿಡಬೇಕು ಎಂಬುದು ಮೈತ್ರಿ ಪಕ್ಷಗಳ ಒಮ್ಮತದ ನಿಲುವಾಗಿದೆ ಎಂದು ಟ್ವಿಟ್ ಮಾಡಿದ್ದಾರೆ.