ಚಿಕ್ಕಮಗಳೂರು: ಶ್ರೀ ಬೋಳರಾಮೇಶ್ವರ ದೇವಾಲಯದಲ್ಲಿ ಸಾವಿರದ ಎಂಟು ಶಿವಲಿಂಗಗಳ ಹಾಗೂ ದ್ವಾದಶ ಜ್ಯೋತಿರ್ಲಿಂಗಗಳ ದರ್ಶನ…

210
firstsuddi

ಚಿಕ್ಕಮಗಳೂರು:ಮಹಾಶಿವರಾತ್ರಿ ಪ್ರಯುಕ್ತ ನಗರದ ಇತಿಹಾಸ ಪ್ರಸಿದ್ದ ಶ್ರೀ ಬೋಳರಾಮೇಶ್ವರ ದೇವಾಲಯದಲ್ಲಿ ಸೋಮವಾರ ಅಭಿಷೇಕ, ವಿಶೇಷ ಅಲಂಕಾರ, ಪೂಜೆ ಜರುಗಿತು.
ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಬೋಳರಾಮೇಶ್ವರ ದೇವಾಲಯದ ಆವರಣದಲ್ಲಿ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್ ಸೋಮವಾರ ಏರ್ಪಡಿಸಿದ್ದ ಸಾವಿರದ ಎಂಟು ಶಿವಲಿಂಗಗಳ ಹಾಗೂ ದ್ವಾದಶ ಜ್ಯೋತಿರ್ಲಿಂಗಗಳ ದರ್ಶನ ಸಾರ್ವಜನಿಕರ ಗಮನ ಸೆಳೆಯಿತು.