ಬಿಬಿಎಂಪಿಯ ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಿಎಂ…

144
firstsuddi

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಬೆಂಗಳೂರಿನ ಆರ್.ಟಿ. ನಗರದ ಮೋದಿ ಗಾರ್ಡನ್ ನಲ್ಲಿ ಆಯೋಜಿಸಿದ್ದ ಬಿಬಿಎಂಪಿಯ ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು. ಆರ್.ಟಿ. ನಗರದ ಮೋದಿ ಗಾರ್ಡನ್ ನಲ್ಲಿ ಬಿಬಿಎಂಪಿಯ ಯೋಜನೆಗಳಿಗಾಗಿ ರಕ್ಷಣಾ ಸಚಿವಾಲಯದ ಸ್ವತ್ತುಗಳ ಹಸ್ತಾಂತರ, ರಾಜ್ಯ ಸರಕಾರದ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಬೆಂಗಳೂರು ಮೆಟ್ರೋ ಯೋಜನೆ ಹಂತ-೨ರ ಅಡಿಯಲ್ಲಿ ಬರುವ ನಿಲ್ದಾಣ ನಿರ್ಮಾಣ ಅಡಿಗಲ್ಲು ಸಮಾರಂಭ ಜರುಗಿತು. ಈ ಸಂದರ್ಭದಲ್ಲಿ ಕೇಂದ್ರ ರಕ್ಷಣಾ ಸಚಿವೆ ನಿರ್ಮಲ ಸೀತರಾಮನ್, ಕೈಗಾರಿಕಾ ಸಚಿವ ಕೆ.ಜೆ ಜಾರ್ಜ್, ಮಾಜಿ ಸಚಿವ ರೋಷನ್ ಬೇಗ್, ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಸೇರಿದಂತೆ ಇತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.