ಅಂತರಾಷ್ತ್ರೀಯ ಮಹಿಳಾ ದಿನಾಚರಣೆಗೆ ಶುಭಾಶಯ ಕೋರಿದ ಸಿದ್ದರಾಮಯ್ಯ…

210
firstsuddi

ಬೆಂಗಳೂರು: ಟ್ವಿಟ್ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಶಯ ಕೋರಿದ್ದು, ಜಾತಿ,ಧರ್ಮಮತ್ತು ಲಿಂಗಭೇದವಿಲ್ಲದೆ ಪ್ರತಿಯೊಬ್ಬರು ರಾಜಕೀಯ ಪ್ರಕ್ರಿಯೆಯಲ್ಲಿ ಪಾಲ್ಗೊಂಡಾಗ ಮಾತ್ರ ಅದು ಪರಿಪೂರ್ಣ ಪ್ರಜಾಪ್ರಭುತ್ವ ವ್ಯವಸ್ಥೆ. ರಾಜಕೀಯ ಕ್ಷೇತ್ರದಲ್ಲಿ ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ಬದ್ಧವಾಗಿದೆ. ನಾಡಿನ ಸ್ತ್ರಿಕುಲಕ್ಕೆ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಶಯಗಳು.
ಪಂಚಾಯತ್ ರಾಜ್ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇಕಡಾ ೫೦ ರಷ್ಟು ಮೀಸಲಾತಿ ನೀಡುವ ಮೂಲಕ ಸ್ತ್ರೀ ಸಬಲೀಕರಣವನ್ನು ಅರ್ಥಪೂರ್ಣವಾಗಿ ಸಾಧ್ಯಮಾಡಿದ್ದು ನನ್ನ ಹೆಮ್ಮೆ.
ಸ್ನಾತಕೋತ್ತರ ಪದವಿವರೆಗೆ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ, ಮಹಿಳಾ ಉದ್ಯಮಿಗಳಿಗೆ ಆರು ಪ್ರತ್ಯೇಕ ಕೈಗಾರಿಕಾ ಪಾರ್ಕ್, ಸ್ತ್ರೀ ಶಕ್ತಿ ಸಂಘಗಳ ಆವರ್ತ ನಿಧಿ ರೂ.೨೫ ಸಾವಿರಕ್ಕೆ ಏರಿಕೆ… ನನ್ನ ಸರ್ಕಾರದ ಮಹಿಳಾ ಸೇವೆ.
ಗರ್ಭಿಣಿ ಮತ್ತು ಬಾಣಂತಿಯರಿಗಾಗಿ ಮಾತೃಪೂರ್ಣ ಯೋಜನೆ, ತಾಯಿ ಮತ್ತು ಮಗುವಿಗೆ ೨೦ ವಿಶೇಷ ಆಸ್ಪತ್ರೆಗಳ ಪ್ರಾರಂಭ.. ನನ್ನ ಸರ್ಕಾರದ ಮಹಿಳಾ ಸೇವೆ. ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಶಯಗಳು ಎಂದು ಟ್ವಿಟ್ ಮಾಡಿದ್ದಾರೆ.