ಹಾವೇರಿ: ಇಂದು ಹಾವೇರಿಯಲ್ಲಿ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ ನಡೆಯಲಿದ್ದು, ರಾಹುಲ್ ಗಾಂಧಿ ನೇತೃತ್ವದಲ್ಲಿ ಲೋಕಸಭೆ ಚುನಾವಣೆ ಪ್ರಚಾರದ ಪರಿವರ್ತನಾ ರ್ಯಾಲಿ ಜರುಗಲಿದೆ. ಸಮಾವೇಶ ಉದ್ದೇಶಿಸಿ ರಾಹುಲ್ ಗಾಂಧಿ ಅವರು ಭಾಷಣ ಮಾಡಲಿದ್ದಾರೆ. ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಪರಿವರ್ತನಾ ಸಮಾವೇಶದಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಲೋಕಸಭೆ ಕಾಂಗ್ರೆಸ್ ಪಕ್ಷದ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಾ. ಜಿ. ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಸೇರಿದಂತೆ ಹಲವು ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.










