ಸುಮಲತಾ ಅವರು ಕಾಂಗ್ರೆಸ್ ವಿರುದ್ಧ ಹೋಗುವುದಿಲ್ಲ ಎಂಬ ವಿಶ್ವಾಸವಿದೆ: ಡಿ ಕೆ ಶಿವಕುಮಾರ್…

176
firstsuddi

ಹುಬ್ಬಳ್ಳಿ: ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರು ಸುಮಲತಾ ಅವರನ್ನು ಮನವೊಲಿಸಲು ನನಗೆ ಹೇಳಿಲ್ಲ. ಕಾಂಗ್ರೆಸ್ ವಿರುದ್ಧ ಸುಮಲತಾ ಅವರು ಹೋಗುವುದಿಲ್ಲ ಎಂಬ ವಿಶ್ವಾಸವಿದೆ. ಮಂಡ್ಯ ಲೋಕಸಭೆ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಡಲಾಗಿದೆ ಎಂದರು. ಸುಮಲತಾ ಅವರ ಬಗ್ಗೆ ರೇವಣ್ಣ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್ ಅವರು ಆ ವಿಚಾರದ ಬಗ್ಗೆ ನನಗೇನೂ ಗೊತ್ತಿಲ್ಲ. ಅವರು ಏನು ಹೇಳಿದ್ದಾರೆ ಎನ್ನುವುದನ್ನು ನೋಡಿ ಮಾತನಾಡುತ್ತೇನೆ ಎಂದಿದ್ದಾರೆ.