ಕಾಂಗ್ರೆಸ್ ನಾಯಕರು ಸುಮಲತಾ ಅವರನ್ನು ಬೆಂಬಲಿಸುತ್ತಿಲ್ಲ:ಸಿದ್ದರಾಮಯ್ಯ…

140
firstsuddi

ಬೆಂಗಳೂರು: ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಟ್ವಿಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನ ಹಾಲಿ ಸಂಸದರಿರುವ ಕ್ಷೇತ್ರ ಜೆಡಿಎಸ್ ಗೆ ಬಿಟ್ಟುಕೊಡುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಮೈಸೂರು ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡುವ ವಿಚಾರ ಇಂದು ನಡೆಯುವ ಸಭೆಯ ನಂತರ ನಿರ್ಧಾರವಾಗುತ್ತದೆ. ಸುಮಲತಾ ಅವರು ಕಾಂಗ್ರೆಸ್ ನಿಂದ ಸ್ಪರ್ಧಿಸುವುದಿಲ್ಲ ಮತ್ತು ಯಾವ ಕಾಂಗ್ರೆಸ್ ನಾಯಕರು ಸುಮಲತಾ ಅವರನ್ನು ಬೆಂಬಲಿಸುತ್ತಿಲ್ಲ.
ಜೆಡಿಎಸ್ ಗೆ ಬಿಟ್ಟ ಕ್ಷೇತ್ರದಲ್ಲಿ ಇಂತವರನ್ನೇ ಅಭ್ಯರ್ಥಿ ಮಾಡಿ ಎಂದು ನಾವು ಹೇಳೋಕೆ ಆಗುವುದಿಲ್ಲ. ಹಾಗೆಯೇ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಜೆಡಿಎಸ್ ನವರು ನಮಗೆ ಹೇಳಲು ಆಗುವುದಿಲ್ಲ. ಹಾಲಿ ಸಂಸದರಿಗೆ ಟಿಕೆಟ್ ನೀಡುವ ಬಗ್ಗೆ ಇಂದು ನಡೆಯುವ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ ಎಂದು ಟ್ವಿಟ್ ಮೂಲಕ ತಿಳಿಸಿದ್ದಾರೆ.