ತರೀಕೆರೆ:ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನ ಬರ್ಬರ ಕೊಲೆ…

304
firstsuddi

ತರೀಕೆರೆ : ಯುವಕನ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಕೊಲೆ ಮಾಡಿರುವ ಘಟನೆ ಪಟ್ಟಣದ ಗಣಪತಿ ಪೆಂಡಾಲ್ ಬಳಿ ನಡೆದಿದೆ. ಪಟ್ಟಣದ ಕನಮನಹಟ್ಟಿ ಬಡಾವಣೆ ನಿವಾಸಿ ಅರುಣ್ ಕುಮಾರ್ (23) ಕೊಲೆಯಾದ ಯುವಕ. ದುಷ್ಕರ್ಮಿಗಳು ಕಳೆದ ರಾತ್ರಿ ಅರುಣ್ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೈದಿದ್ದು, ಸ್ಥಳಕ್ಕೆ ತರೀಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.