ಚಿತ್ರದುರ್ಗ: ಪತಿಯನ್ನು ಪತ್ನಿಯೇ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಸಲಬಮ್ಮನಹಳ್ಳಿಯಲ್ಲಿ ನಡೆದಿದೆ. ದಾಸಪ್ಪ (35) ಪತ್ನಿಯಿಂದಲೇ ಕೊಲೆಯಾದ ಪತಿ. ದಾಸಪ್ಪ ಪತ್ನಿಯ ಶೀಲ ಶಂಕಿಸಿ ಕಿರುಕುಳ ನೀಡುತ್ತಿದ್ದ ಹಿನ್ನಲೆ ಪತ್ನಿ ನೇತ್ರಾವತಿ ಕಬ್ಬಿಣದ ರಾಡ್ ನಿಂದ ತಲೆಗೆ ಹೊಡೆದು ಪತಿಯನ್ನು ಕೊಲೆ ಮಾಡಿದ್ದು, ಬಳಿಕ ಶವವನ್ನು ಹೂತು ಹಾಕುವ ಪ್ರಯತ್ನ ಮಾಡಿದ್ದು, ನೇತ್ರಾವತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಬಗ್ಗೆ ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










