ಮಂಡ್ಯ : ಜೆಡಿಎಸ್ ಪಕ್ಷದ ಸಮಾವೇಶ ಆರಂಭಕ್ಕೂ ಮುನ್ನ ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ಅವರು ಲೋಕಸಭಾ ಚುನಾವಣಾ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಈ ಮೂಲಕ ನಿಖಿಲ್ ಕುಮಾರಸ್ವಾಮಿ ಅವರು ಮಂಡ್ಯದಿಂದ ಸ್ಪರ್ಧಿಸುತ್ತಿರುವುದು ಖಚಿತವಾಗಿದೆ.










