ಬೆಂಗಳೂರು : ಲೋಕಸಭಾ ಚುನಾವಣೆಗೆ ಸಜ್ಜಾಗುತ್ತಿರುವ ಹಿನ್ನೆಲೆ ನಿಖಿಲ್ ಕುಮಾರಸ್ವಾಮಿ ಅವರು ಮೈಸೂರು ರಸ್ತೆಯಲ್ಲಿರುವ ಗಾಳಿ ಆಂಜನೇಯ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಂಡ್ಯ ಜಿಲ್ಲೆಯ ಏಳು ಶಾಸಕರ ಒತ್ತಡದಿಂದ ನನಗೆ ಇಂದು ಮಂಡ್ಯ ಜಿಲ್ಲೆಯ ಟಿಕೆಟ್ ದೊರಕಿದ್ದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯ ಜಿಲ್ಲೆಗೆ 9 ಸಾವಿರ ಕೋಟಿ ಅನುಧಾನವನ್ನು ನೀಡಿದ್ದು, ನನ್ನ ಗೆಲುವಿಗೆ ಶ್ರೀರಕ್ಷೆಯಾಗಲಿದೆ.
ಕೆಲವು ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಚುನಾವಣೆ ಸಮೀಕ್ಷೆ ಬಗ್ಗೆ ಹಾಗೂ ಪರ ವಿರೋಧ ಚರ್ಚೆಗಳು ನಡೆಯುತ್ತಿದ್ದು, ಇದರ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ನನಗೆ ಮಂಡ್ಯ ಜನರು ಆಶೀರ್ವದಿಸುತ್ತಾರೆ ಎಂದು ನಂಬಿಕೆ ಇದೆ. ಮುಂದಿನ ದಿನಗಳಲ್ಲಿ ನಾನು ಹಾಗೂ ಪ್ರಜ್ಚಲ್ ರೇವಣ್ಣ ಸೇರಿ ಪಕ್ಷ ಕಟ್ಟಬೇಕಾಗಿದೆ. ಮಂಡ್ಯ ಜನರ ಕೈಯಲ್ಲಿ ನಮ್ಮ ರಾಜಕೀಯ ಭವಿಷ್ಯ ಇದೆ ಎಂದಿದ್ದಾರೆ.










