ಮೂಡಿಗೆರೆ : ಹೃದಯಾಘಾತದಿಂದ ಬ್ಯಾಂಕ್ ಉದ್ಯೋಗಿಯೋರ್ವರು ಮೃತಪಟ್ಟಿರುವ ಘಟನೆ ಮೂಡಿಗೆರೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನಡೆದಿದೆ. ಸುಜಾತ (53) ಮೃತ ಬ್ಯಾಂಕ್ ಉದ್ಯೋಗಿ. ಸುಜಾತ ಅವರು ಮೂಡಿಗೆರೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಉಪ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಇಂದು ಎಂದಿನಂತೆ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಅವರು ಕಂಪ್ಯೂಟರ್ ಮುಂಭಾಗ ಕುಸಿದು ಬಿದ್ದಿದ್ದು, ತಕ್ಷಣ ಅವರನ್ನು ಬ್ಯಾಂಕ್ ಸಿಬ್ಬಂದಿಗಳು ಎಂ.ಜಿ.ಎಂ ಆಸ್ಪತ್ರೆಗೆ ಕರೆದೊಯ್ದಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಸುಜಾತ ಅವರು ಮೂಲತಃ ಹಾಸನದ ಹೊಳೆನರಸೀಪುರದವರು ಎನ್ನಲಾಗಿದ್ದು, ಕಳೆದ ನಾಲ್ಕು ತಿಂಗಳ ಹಿಂದೆ ಬೆಂಗಳೂರಿನಿಂದ ಮೂಡಿಗೆರೆಗೆ ವರ್ಗಾವಣೆಗೊಂಡಿದ್ದರು ಎಂದು ತಿಳಿದು ಬಂದಿದೆ.










