ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟ ಕಾಂಗ್ರೆಸ್, ಸಾಮಾಜಿಕ ಜಾಲತಾಣದಲ್ಲಿ ಗೇಲಿ ಮಾಡುತ್ತಿರುವ ಬಿಜೆಪಿ ಕಾರ್ಯಕರ್ತರು…

192
firstsuddi

ಚಿಕ್ಕಮಗಳೂರು : ಮಾಜಿ ಪ್ರಧಾನಿ ಇಂದಿರಾ ಗಾಂಧಿಗೆ ಪುನರ್ ಜನ್ಮ ನೀಡಿದ್ದ ಹಾಗೂ ಡಿ.ಬಿ. ಚಂದ್ರೇಗೌಡ, ಬಿ.ಎಲ್ ಶಂಕರ್, ಡಿ.ಕೆ. ತಾರಾದೇವಿಯಂತಹ ನಾಯಕರು ಗೆದ್ದಿದ್ದ ಪಾಳಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೊರತೆಯುಂಟಾಗಿರುವುದು ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಲ್ಲಿ ಪ್ರಬಲ ಅಭ್ಯರ್ಥಿಗಳೇ ಇಲ್ಲ ಎಂದು ಕಾಂಗ್ರೆಸ್ ಜೆಡಿಎಸ್ ಗೆ ಕ್ಷೇತ್ರವನ್ನು ಬಿಟ್ಟುಕೊಟ್ಟಿದೆ. ಇದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲಾ ತಾಣಗಳಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಹಾಗೂ ಜೆಡಿಎಸ್ ನನ್ನು ಗೇಲಿ ಮಾಡುತ್ತಿದ್ದು, ಇದರಿಂದ ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನ ಸ್ಪೋಟವಾಗಿದೆ.