ಹೈದರಾಬಾದ್ : ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಅವರಿಗೆ ಲಘು ಹೃದಯಾಘಾತ…

202
firstsuddi

ಹೈದರಾಬಾದ್ : ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಅವರನ್ನು ಹೈದರಾಬಾದ್‍ನ ಓಜೋನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಶ್ವನಾಥ್ ಅವರ ಆರೋಗ್ಯ ಚೇತರಿಸಿಕೊಂಡ ಬಳಿಕ ಏರ್ ಆಂಬುಲೆನ್ಸ್ ಮೂಲಕ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಬರಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.