ನವದೆಹಲಿ : ಸಾಲುಮರದ ತಿಮ್ಮಕ್ಕ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪದ್ಮಶ್ರೀ ಪ್ರಶಸ್ತಿಯನ್ನು ರಾಷ್ಟ್ರಪತಿ ಭವನದಲ್ಲಿ ಪ್ರಧಾನ ಮಾಡಿದರು. ಈ ಸಂದರ್ಭದಲ್ಲಿ ಸಾಲು ಮರದ ತಿಮ್ಮಕ್ಕ ಅವರು ರಾಷ್ಟ್ರಪತಿ ಅವರ ಹಣೆಯನ್ನು ಮುಟ್ಟಿ ಆಶೀರ್ವದಿಸಿದರು. ರಾಷ್ಟ್ರಪತಿಯವರು ಕೂಡ ತಿಮ್ಮಕ್ಕ ಅವರ ಆಶೀರ್ವಾದವನ್ನು ಭಕ್ತಿ ಪೂರ್ವಕವಾಗಿ ಸ್ವೀಕರಿಸಿದ್ದು ವಿಶೇಷವಾಗಿತ್ತು.










