ಹಾಸನ : ಶಾಸಕ ಎ. ಮಂಜು ಅವರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದು, ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶಾಸಕ ಪ್ರೀತಂ ಗೌಡ ಅವರು ಬರಮಾಡಿಕೊಂಡರು. ಹಾಸನದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಎದುರು ಬಿಜೆಪಿ ಅಭ್ಯರ್ಥಿಯಾಗಿ ಹಾಸನದಲ್ಲಿ ಕಣಕ್ಕಿಳಿಯಲಿದ್ದಾರೆ ಎಂದು ತಿಳಿದು ಬಂದಿದೆ.










