ನನಗು, ರಾಜಕಾರಣಕ್ಕೂ ಯಾವುದೇ ಸಂಬಂಧ ಇಲ್ಲ: ಪುನೀತ್ ರಾಜ್ ಕುಮಾರ್…

241
firstsuddi

ಬೆಂಗಳೂರು: ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಹಾಗೂ ಸುಮಲತಾ ನಡುವೆ ಭಾರೀ ಸ್ಪರ್ಧೆ ಏರ್ಪಟ್ಟಿದ್ದು, ಸುಮಲತಾ ಪರ ಪ್ರಚಾರದಲ್ಲಿ ನಟ ಪುನೀತ್ ರಾಜ್ ಕುಮಾರ್ ಅವರು ಭಾಗಿಯಾಗುತ್ತಾರೆ ಎನ್ನುವ ಉಹಾಪೋಹಗಳಿಗೆ ಸಂಬಂಧಿಸಿದಂತೆ ಪುನೀತ್ ರಾಜ್ ಕುಮಾರ್ ಅವರು ಪತ್ರವನ್ನು ಬರೆದು ಸ್ವಷ್ಟನೆ ನೀಡಿದ್ದಾರೆ.
ಪತ್ರದಲ್ಲಿ ಏನಿದೆ..? 
ಎಲ್ಲರಿಗೂ ನನ್ನ ನಮಸ್ಕಾರ.. ನನಗು, ರಾಜಕಾರಣಕ್ಕೂ ಯಾವುದೇ ಸಂಬಂಧ ಇಲ್ಲ ಎಂಬುವುದು ನಿಮಗೆ ತಿಳಿದಿರುವ ವಿಚಾರ. ನಾನು ಒಬ್ಬ ನಟನಾಗಿ ನನ್ನನ್ನು ಕಲೆಯ ಜೊತೆಗೆ ಗುರುತಿಸಿಕೊಳ್ಳುತ್ತೇನೆ ಹೊರತು ರಾಜಕಾರಣದಲಲ್ಲ..ನಾನು ಹೇಳ ಬಯಸುವ ವಿಚಾರವೇನೆಂದರೆ ಮತ ಚಲಾಯಿಸುವುದು ಪ್ರತಿಯೊಬ್ಬರ ನಾಗರೀಕರ ಕರ್ತವ್ಯ ಹಾಗು ಅವರ ಆಯ್ಕೆಗೆ ಸಂಬಂಧ ಪಟ್ಟಿದ್ದು. ಅದನ್ನು ಈ ದೇಶದ ಹಾಗು ಈ ನಾಡಿನ ನಾಗರೀಕನಾಗಿ ನಾನು ಗೌರವಿಸುತ್ತೇನೆ. ಕನ್ನಡ ಜನತೆಗೆ ಹಾಗು ನಮ್ಮ ಅಭಿಮಾನಿಗಳಿಗೆ ಅವರ ಮತವನ್ನು ಪ್ರಬುದ್ಧವಾಗಿ ಚಲಾಯಿಸಿ ಎಂದು ಕೇಳಿಕೊಂಡಿದ್ದೇನೆ ಹೊರತು ಯಾವುದೇ ಪಕ್ಷ ಹಾಗೂ ವ್ಯಕ್ತಿಗೆ ಎಂದಿಗೂ ಸೂಚಿಸಿರುವುದಿಲ್ಲ.ಗೌರವಾನ್ವಿತ ದೇವೇಗೌಡರ ಕುಟುಂಬವು ಹಾಗು ಅಂಬರೀಷ್ ರವರ ಕುಟುಂಬವು ನಮ್ಮ ಕುಟುಂಬದ ಹಾಗೆ, ಇಬ್ಬರು ನಮ್ಮ ಹಿತೈಷಿಗಳೇ. ಇಬ್ಬರಿಗೂ ಒಳ್ಳೆದಾಗಲಿ, ಆ ಭಗವಂತ ನಿಮಗೆ ಜನಸೇವೆ ಮಾಡುವ ಶಕ್ತಿ ಇನ್ನಷ್ಟು ಕೊಡಲಿ ಎಂದು ಪ್ರಾರ್ಥಿಸುತ್ತ ನನ್ನ ಹೆಸರನ್ನು ಚುನಾವಣೆಗೆ ಹಾಗು ರಾಜಕಾರಣಕ್ಕೆ ಸಂಬಂಧಿಸಬೇಡಿ ಎಂದು ಎಲ್ಲರಲ್ಲು ವಿನಂತಿಸಿ ಕೊಳ್ಳುತ್ತೇನೆ.ನಿಮ್ಮ ಮತ ನಿಮ್ಮ ಆಯ್ಕೆ ಎಂದು ಪುನೀತ್ ರಾಜ್ ಕುಮಾರ್ ಅವರು ಪತ್ರ ಬರೆದಿದ್ದಾರೆ.