ಚಿಕ್ಕಮಗಳೂರು: ನಿಖಿಲ್ ಕುಮಾರಸ್ವಾಮಿ ವಿರುದ್ದ ಬಿಜೆಪಿ ದೂರು…

206
firstsuddi

ಚಿಕ್ಕಮಗಳೂರು :ನಿಖಿಲ್ ಕುಮಾರಸ್ವಾಮಿ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆಂದು ನಿಖಿಲ್ ವಿರುದ್ದ ಜಿಲ್ಲಾ ಬಿಜೆಪಿ ಮುಖಂಡರು ದೂರು ನೀಡಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರು ಶೃಂಗೇರಿ ಮಠಕ್ಕೆ ಭೇಟಿ ನೀಡಿದಾಗ ಮಠದ ಆವರಣದಲ್ಲಿ ಮಾಧ್ಯಮಗಳ ಜೊತೆ ಮಾತಾಡಿರುವ ಬಗ್ಗೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಬಗ್ಗೆ ಚಿಕ್ಕಮಗಳೂರು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಬಗಾದಿ ಗೌತಮ್ ಅವರಿಗೆ ಜಿಲ್ಲಾ ಬಿಜೆಪಿ ಮುಖಂಡರು ದೂರು ನೀಡಿ ನಿಖಿಲ್ ವಿರುದ್ದ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.