ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಕರ್ತಿಕೆರೆ ಸಮೀಪ ನಡೆದಿದೆ. ಸಾಗರ್ (26) ಮೃತ ದುರ್ದೈವಿ. ಹಾಸನದಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದ್ದು, ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.










