ಬೆಂಗಳೂರು : ನಟ ದರ್ಶನ್ ಅವರು ಅಭಿಮಾನಿಗಳಿಗೆ ಪತ್ರವನ್ನು ಬರೆದಿದ್ದಾರೆ. ಚುನಾವಣಾ ಸಮಯದಲ್ಲಿ ಆಪಾದನೆಗಳನ್ನು ಮಾಡುವುದು ಸರ್ವೇ ಸಾಮಾನ್ಯ, ಇದಕ್ಕೆಲ್ಲ ನಾನು ಬೇಜಾರು, ಕೋಪ ಏನು ಮಾಡ್ಕೊಳಲ್ಲ ಅಂತ ಮೊದಲೇ ಹೇಳಿದ್ದೇನೆ, ಅದೇ ರೀತಿ ನನ್ನ ಪ್ರೀತಿಯ ಅಭಿಮಾನಿಗಳು ಸಹ ಏನೇ ಹೇಳಿದರು ಅದರ ವಿರುದ್ಧ ಪೋಸ್ಟ್ ಮಾಡುವುದಾಗಲಿ, ವಿಡಿಯೋಗಳಾಗಲಿ ಮಾಡುವ ಗೋಜಿಗೆ ಹೋಗಬೇಡಿ. ಅವೆಲ್ಲದಕ್ಕೂ ಕಿವಿ ಕೊಡದೆ ಶಾಂತಿ ಕಾಪಾಡಿಕೊಂಡು ಆರಾಮಾಗಿರಬೇಕಾಗಿ ನಿಮ್ಮ ನಲ್ಮೆಯ ದಾಸನ ಕಳಕಳಿಯ ವಿನಂತಿ ಎಂದು ದರ್ಶನ್ ಅವರು ಟ್ವಿಟ್ಟರ್ ನಲ್ಲಿ ಪತ್ರವನ್ನು ಪೋಸ್ಟ್ ಮಾಡಿದ್ದಾರೆ.











