ಹಾವೇರಿ: ಮಿನಿಬಸ್ ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಹದಿನಾರು ಜನರು ಗಾಯಗೊಂಡ ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ. ರಬ್ಬಾನಿ (45), ಖಾದರ್ (50) ಮತ್ತು ಶಬ್ಬೀರ್(42) ಮೃತರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಹಾವೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










