ಬೆಂಗಳೂರು :ಹಾಸನ ಜಿಲ್ಲಾ ಘಟಕದ ಬಿಜೆಪಿ ಅಧ್ಯಕ್ಷ ಯೋಗ ರಮೇಶ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ಧ್ವಜ ನೀಡುವ ಮೂಲಕ ಯೋಗ ರಮೇಶ್ ಅವರನ್ನು ಅಧಿಕೃತವಾಗಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.










