ನಾಮಪತ್ರ ವಾಪಸ್ ಪಡೆದ ಮುದ್ದಹನುಮೇಗೌಡ…

263
firstsuddi

ತುಮಕೂರು : ಮುದ್ದಹನುಮೇಗೌಡ ಅವರು ಸಲ್ಲಿಸಿದ್ದ ನಾಮಪತ್ರವನ್ನು ವಾಪಾಸ್ ಪಡೆದಿದ್ದಾರೆ. ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಮುದ್ದಹನುಮೇಗೌಡ ಅವರು ಬೆಂಬಲಿಗರೊಂದಿಗೆ ಚರ್ಚಿಸಿ ಬಳಿಕ ನಾಮಪತ್ರವನ್ನು ಹಿಂಪಡೆದಿದ್ದಾರೆ. ಮುದ್ದಹನುಮೇಗೌಡರ ಮನವೊಲಿಸುವಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಯಶಸ್ವಿಯಾಗಿದ್ದಾರೆ.