ಬೆಂಗಳೂರು : ತುಮಕೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಮುದ್ದಹನುಮೇಗೌಡ ಅವರು ಹಾಗೂ ಕೆ .ಎನ್. ರಾಜಣ್ಣರವರು ಸಲ್ಲಿಸಿದ್ದ ನಾಮಪತ್ರವನ್ನು ವಾಪಾಸ್ ಪಡೆದಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಟ್ವಿಟರ್ ಮೂಲಕ ಧನ್ಯವಾದವನ್ನು ತಿಳಿಸಿದ್ದಾರೆ.ನನ್ನ ಮಾತಿಗೆ ಗೌರವ ಕೊಟ್ಟು ತುಮಕೂರು ಕ್ಷೇತ್ರದಿಂದ ಮಾನ್ಯ ಮುದ್ದ ಹನುಮೇಗೌಡರು ಹಾಗೂ ಕೆ.ಎನ್. ರಾಜಣ್ಣರವರು ನಾಮಪತ್ರ ಹಿಂಪಡೆದಿರುವ ನಡೆಯನ್ನು ನಾನು ಸ್ವಾಗತಿಸುತ್ತೇನೆ. ಅವರ ಬೆಂಬಲದೊಂದಿಗೆ ಕಾಂಗ್ರೆಸ್- ಜೆಡಿಎಸ್ ಒಟ್ಟಾಗಿ ಕ್ಷೇತ್ರದಲ್ಲಿ ದೇವೇಗೌಡರ ಗೆಲುವಿಗೆ ಶ್ರಮಿಸಲಿವೆ. ಕೇಂದ್ರದಲ್ಲಿ ಬಿಜೆಪಿಯನ್ನು ಸೋಲಿಸಿ ಹೊಸ ಭವಿಷ್ಯ ಬರೆಯೋಣ ಎಂದು ಟ್ವೀಟ್ ಮಾಡಿದ್ದಾರೆ.










