ಬೆಂಗಳೂರು : ಐಟಿ ದಾಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದು, ಐಟಿ ಅಧಿಕಾರಿಗಳು ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು ದಾಳಿ ಮುಂದುವರಿಸಿದ್ದಾರೆ. ಮಂಡ್ಯದ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಅಕ್ಕಿ ಗಿರಣಿಗಳ ಮೇಲೆ ಬೆಳಗಿನ ಜಾವ 4 ಗಂಟೆ ವರೆಗೆ ದಾಳಿ ಮಾಡಿ ಸ್ಪೈ ಕ್ಯಾಮೆರಾ ಅಳವಡಿಸಿದ್ದಾರೆ. ರೈಲ್ವೆ ಅಧಿಕಾರಿಗಳ ಸೋಗಿನಲ್ಲಿ ಕಾರು ಕಾರು ಬಾಡಿಗೆ ಪಡೆದಿದ್ದಾರೆ.
ಮೈಸೂರಿನ ಸಿಎಫ್ ಟಿಆರ್ ಐ ನಲ್ಲಿ ತಂಗಿರುವ ಅಧಿಕಾರಿಗಳು ಕಾರ್ಯಕರ್ತರನ್ನು ಬೆದರಿಸಲು ಈ ತಂತ್ರ ಹೆಣೆದಿದ್ದಾರೆ. ಕೇಂದ್ರ ಸರ್ಕಾರದ ನೇರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಈ ತಂತ್ರವನ್ನು ಬಲವಾಗಿ ಖಂಡಿಸುತ್ತೇನೆ. ಚುನಾವಣಾ ಆಯೋಗ ಕೂಡಲೇ ಮಧ್ಯ ಪ್ರವೇಶಿಸುವ ಅಗತ್ಯವಿದೆ ಎಂದು ಟ್ವೀಟ್ ಮಾಡಿದ್ದಾರೆ.










