ಚಿಕ್ಕಮಗಳೂರು- ಲೋಕಸಭಾ ಚುನಾವಣೆ ಪ್ರಯುಕ್ತ ರಾಜ್ಯದ ಮುಖ್ಯಮಂತ್ರಿ ಹಾಗೂ ಜೆ.ಡಿ.ಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು ಏಪ್ರಿಲ್ 5 ಶುಕ್ರವಾರ ಜಿಲ್ಲೆಯ ವಿವಿಧೆಡೆ ಚುನಾವಣಾ ಪ್ರಚಾರ ನಡೆಸಲಿದ್ದಾರೆಂದು ಜೆ.ಡಿ.ಎಸ್ ರಾಜ್ಯ ವಕ್ತಾರರು ಮತ್ತು ಶಾಸಕರೂ ಆದ ಎಸ್.ಎಲ್. ಭೋಜೇಗೌಡ ರವರು ತಿಳಿಸಿದ್ದಾರೆ.
ಅವರು ಈ ಕುರಿತು ಪತ್ರಿಕಾ ಹೇಳಿಕೆ ನೀಡಿ, ಏಪ್ರಿಲ್ 4ರಂದು ರಾತ್ರಿ ಜಿಲ್ಲೆಯ ಕೊಪ್ಪಕ್ಕೆ ಆಗಮಿಸಲಿರುವ ಕುಮಾರಸ್ವಾಮಿ ರವರು ಕೊಪ್ಪದಲ್ಲಿ ವಾಸ್ತವ್ಯ ಮಾಡುವರು. ಏಪ್ರಿಲ್ 5ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಕೊಪ್ಪದ ಲಾಲ್ ಬಹದೂರ್ ಶಾಸ್ತ್ರಿ ಪುರಸಭಾ ಕ್ರೀಡಾಂಗಣದಲ್ಲಿ ನಡೆಯಲಿರುವ ಕಾಂಗ್ರೆಸ್-ಜೆ.ಡಿ.ಎಸ್ ಮೈತ್ರಿ ಪಕ್ಷಗಳ ಕಾರ್ಯಕರ್ತರ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿ ಅವರು ಚುನಾವಣಾ ಪ್ರಚಾರ ನಡೆಸುವರು. ನಂತರ ಮುಖ್ಯಮಂತ್ರಿಗಳು ಮೂಡಿಗೆರೆಯ ಹೊಯ್ಸಳ ಕ್ರೀಡಾಂಗಣದಲ್ಲಿ ಮಧ್ಯಾಹ್ನ 2.30ಕ್ಕೆ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿ, ಚುನಾವಣಾ ಪ್ರಚಾರ ನಡೆಸಲಿದ್ದಾರೆ.ಅಂದು ಸಂಜೆ 5 ಗಂಟೆಗೆ ತರೀಕೆರೆಯ ಬಯಲು ರಂಗಮಂದಿರದಲ್ಲಿ ಬೃಹತ್ ಚುನಾ ವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಖ್ಯಮಂತ್ರಿ ಗಳು ಮಾತನಾಡಲಿದ್ದಾರೆ ಎಂದು ತಿಳಿಸಿದ್ದಾರೆ.










