ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಕಾಶ್ಮೀರ ವಿಷಯದಲ್ಲಿ ಶಾಂತಿ ಒಪ್ಪಂದಕ್ಕೆ ಬರಬಹುದು : ಇಮ್ರಾನ್ ಖಾನ್…

180
firstsuddi

ಇಸ್ಲಮಾಬಾದ್ : ವಿದೇಶದ ಸುದ್ದಿಗಾರರೊಂದಿಗೆ ಮಾತನಾಡಿದ ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಅವರು ಭಾರತ ದೇಶದಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಗೆದ್ದರೆ ಒಳ್ಳೆಯದು. ಏ.11 ರಿಂದ ಲೋಕಸಭಾ ಚುನಾವಣೆಯ 7 ಹಂತದ ಮತದಾನ ಪ್ರಕ್ರಿಯೆ ಪ್ರಾರಂಭವಾಗಲಿದೆ. ಈ ಚುನಾವಣೆಯಲ್ಲಿ ಮತ್ತೊಮ್ಮೆ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಕಾಶ್ಮೀರ ವಿಷಯದಲ್ಲಿ ಶಾಂತಿ ಒಪ್ಪಂದಕ್ಕೆ ಬರಬಹುದು. ಒಂದು ವೇಳೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಕಾಶ್ಮೀರಕ್ಕೆ ಸಂಬಂಧಿಸಿದಂತೆ ಯಾವುದೇ ಮಾತುಕತೆ ನಡೆಸಿ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗದೇ ಇರಬಹುದು ಎಂದು ಹೇಳಿದ್ದಾರೆ. ಪುಲ್ವಾಮ ದಾಳಿಗೆ ಸಂಬಂಧಿಸಿದಂತೆ ಮಾತನಾಡಿದ ಇಮ್ರಾನ್ ಖಾನ್ ಅವರು ಪಾಕಿಸ್ತಾನ ಸರ್ಕಾರವು ಜೈಶ್ ಸಂಘಟನೆ ಸೇರಿದಂತೆ ಎಲ್ಲಾ ಉಗ್ರ ಸಂಘಟನೆಗಳ ವಿರುದ್ಧ ಕ್ರಮಕೈಗೊಂಡಿದೆ ಎಂದು ಹೇಳಿದ್ದಾರೆ.