ಚಿಕ್ಕಮಗಳೂರು : ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಕರ್ನಾಟಕದಲ್ಲಿ ನಾವು 22 ಸ್ಥಾನ ಗೆದ್ದೆ ಗೆಲ್ಲುತ್ತೇವೆ. ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮಾಧ್ಯಮದವರ ಮೇಲೆ ದಾಳಿಯಾದರೆ ಅದಕ್ಕೆ ನಾನು ಜವಾಬ್ದಾರರಲ್ಲ ಎಂದು ಹೇಳಿದ್ದರು. ಮಾಧ್ಯಮದವರ ಬಗ್ಗೆ ಇಷ್ಟು ಹಗುರವಾಗಿ ಮಾತನಾಡುವುದು ಸರಿಯಲ್ಲ. ಇದನ್ನು ನಾನು ಖಂಡಿಸುತ್ತೇನೆ. ಮಾಧ್ಯಮದವರ ಬಗ್ಗೆ ಹಗುರವಾಗಿ ಹೇಳಿಕೆ ನೀಡಿರುವುದಕ್ಕೆ ಈ ಕೂಡಲೇ ಸಿಎಂ ಕುಮಾರಸ್ವಾಮಿ ಅವರು ಕ್ಷಮೆ ಕೇಳಬೇಕು ಎಂದು ಒತ್ತಾಯ ಮಾಡಿದ್ದಾರೆ. ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ಅವರು ಗೆಲ್ಲುವುದು ನಿಶ್ಚಿತ. ಹೀಗಾಗಿ ಮಂಡ್ಯದಲ್ಲಿ ಸಿಎಂ ಗೆ ಭಯ ಉಂಟಾಗಿದೆ. ಹಾಗಾಗಿ ಮಾಧ್ಯಮದವರ ಮೇಲೆ ಹಗುರವಾಗಿ ಮಾತನಾಡುತ್ತಿದ್ದಾರೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಶೋಭ ಕರಂದ್ಲಾಜೆ ಅವರು ಗೆದ್ದೆ ಗೆಲ್ಲುತ್ತಾರೆ. ಇದು ದಪ್ಪ ಚರ್ಮದ ಸರ್ಕಾರ. ಯಾವುದೇ ವಿಷಯಕ್ಕೂ ಸಿಎಂ ತಲೆಕೆಡಿಸಿಕೊಳ್ಳುವುದಿಲ್ಲ. ಈ ಲೋಕಸಭಾ ಚುನಾವಣೆಯ ನಂತರ ಅಪ್ಪ ಮಕ್ಕಳನ್ನು ಮನೆಗೆ ಕಳುಹಿಸುವ ಕೆಲಸ ಜನರು ಮಾಡುತ್ತಾರೆ ಎಂದು ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಕಿಡಿಕಾರಿದ್ದಾರೆ.










