ಚಿಕ್ಕಮಗಳೂರು : ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯ ವಕ್ತಾರ ಹಾಗೂ ಶಾಸಕರಾದ ಎಸ್.ಎಲ್. ಭೋಜೇಗೌಡ ಅವರು ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಅವರ ಪರವಾಗಿ ಚುನಾವಣಾ ಪ್ರಚಾರ ಮಾಡಲು ಏ.15ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಆಗಮಿಸಿ ನಗರದಲ್ಲಿ ರೋಡ್ ಶೋ ನಡೆಸಿ ಬಳಿಕ ಬಹಿರಂಗ ಪ್ರಚಾರ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡುತ್ತಾರೆ ಎಂದು ಹೇಳಿದ್ದಾರೆ.










