ಚಿಕ್ಕಮಗಳೂರು : ಮೈತ್ರಿ ಕೂಟದ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಪರ ಜಿಲ್ಲಾ ಯುವ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಬೈಕ್ ರ್ಯಾಲಿ ನಡೆಸಿದರು.
ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಕಾಂಗ್ರೆಸ್ ಕಛೇರಿಯಿಂದ ಬೈಕ್‍ನಲ್ಲಿ ಜಾಥಾ ಹೊರಟ ನೂರಾರು ಕಾರ್ಯಕರ್ತರು ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ದ ಘೋಷಣೆ ಕೂಗುತ್ತಾ ನಗರದ ಮುಖ್ಯ ಬೀದಿಗಳಲ್ಲಿ ಸಂಚರಿಸಿದರು.
ಕಾಂಗ್ರೆಸ್ ಕಛೇರಿ ಬಳಿ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ|| ಡಿ.ಎಲ್.ವಿಜಯಕುಮಾರ್, ಸಂಸದೆ ಶೋಭಾ ಕರಂದ್ಲಾಜೆ ಅವರ ವೈಫಲ್ಯ, ಮೈತ್ರಿ ಕೂಟದ ಅಭ್ಯರ್ಥಿಯ ಗೆಲುವಿಗೆ ಕಾರಣವಾಗಲಿದೆ ಎಂದರು.
ಜಿಲ್ಲಾ ಯುವ ಕಾಂಗ್ರೇಸ್ ಅಧ್ಯಕ್ಷ ಕೆ.ವಿ.ಶಿವಕುಮಾರ್ ಮಾತನಾಡಿ ಯುವ ಜನತೆ ಕೋಮುವಾದಿಗಳ ಬಣ್ಣದ ಮಾತಿಗೆ ಮರುಳಾಗಬಾರದು, ದೇಶದ ಅಭಿವೃದ್ದಿಗಾಗಿ ಮತ್ತು ಜಾತ್ಯಾತೀತ ತತ್ವದ ಉಳಿವಿಗಾಗಿ ಮೈತ್ರಿ ಕೂಟದ ಅಭ್ಯರ್ಥಿಗಳನ್ನು ಬೆಂಬಲಿಸಬೇಕು ಎಂದು ಕರೆ ನೀಡಿದರು.










