ಕೊಲಂಬೊದಲ್ಲಿ ಸರಣಿ ಬಾಂಬ್ ಸ್ಪೋಟಗೊಂಡು ಜೆಡಿಎಸ್ ಕಾರ್ಯಕರ್ತರ ಸಾವಿಗೆ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಸಂತಾಪ…

211
firstsuddi

ಬೆಂಗಳೂರು : ಕೊಲಂಬೊದಲ್ಲಿ ಸರಣಿ ಬಾಂಬ್ ಸ್ಪೋಟಗೊಂಡು ಕರ್ನಾಟಕದ ಜೆಡಿಎಸ್ ಕಾರ್ಯಕರ್ತರ ಸಾವಿಗೆ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಟ್ವಿಟರ್ ಮೂಲಕ ಸಂತಾಪ ಸೂಚಿಸಿದ್ದಾರೆ. ಕೊಲಂಬೊದಲ್ಲಿ ಪ್ರವಾಸದಲ್ಲಿದ್ದ ರಾಜ್ಯದ ಜೆಡಿಎಸ್ ನ ಏಳು ಮಂದಿಯ ತಂಡ ಬಾಂಬ್ ಸ್ಫೋಟದ ನಂತರ ಕಾಣೆಯಾಗಿದ್ದಾರೆ. ಇದನ್ನು ಕೇಳಿ ನನಗೆ ಇನ್ನಿಲ್ಲದ ಆಘಾತ ಹಾಗೂ ನೋವಾಗಿದೆ. ಈ ಪೈಕಿ ಇಬ್ಬರು ಭಯೋತ್ಪಾದಕರ ದಾಳಿಗೆ ಬಲಿಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಕಳೆದು ಹೋಗಿರುವವರ ಪತ್ತೆ ಹಚ್ಚಲು ನಾನು ಭಾರತ ರಾಯಭಾರ ಕಚೇರಿಯೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.